ಪಂಜ:ಬಿಜೆಪಿ ಸುಳ್ಯ ಮಂಡಲ ಸಮಿತಿಯ ವತಿಯಿಂದ ಮತದಾರರ ಚೇತನಾ ಅಭಿಯಾನದ ಪ್ರಯುಕ್ತ ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಎಲ್ಎ-2 ಕಾರ್ಯಾಗಾರ ಅ.4ರಂದು ಪಂಜ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು
ರಾಷ್ಟ್ರೀಯ ವಿಚಾರಧಾರೆಗಳೇ ಬಿಜೆಪಿಗೆ ಪ್ರಮುಖ ಧ್ಯೇಯ. ತತ್ವ ಮತ್ತು ಆದರ್ಶಗಳ ಅಡಿಯಲ್ಲಿ ಪಕ್ಷ ಕಾರ್ಯ ನಿರ್ವಹಿಸುತ್ತದೆ ಎಂದು ಅವರು ಹೇಳಿದರು.ಕಳೆದ ಒಂಭತ್ರು ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶವನ್ನು ಎಲ್ಲಾ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದೆ. ವಿಶ್ವದಲ್ಲಿಯೇ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆದಿದೆ ಎಂದು ಹೇಳಿದರು. ಮುಂದಿನ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಅದಕ್ಕೆ ಎಲ್ಲಾ ಕಾರ್ಯಕರ್ತರ ಪ್ರಯತ್ನ ಅಗತ್ಯ ಎಂದು ಅವರು ಹೇಳಿದರು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ , ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಕೃಷ್ಣ ಶೆಟ್ಟಿ ಕಡಬ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಭೋದ್ ಶೆಟ್ಟಿ ಮೇನಾಲ ,ರಾಕೇಶ್ ರೈ ಕೆಡೆಂಜಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.