ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಮತ್ತು ಜನರಿಗೆ ಪ್ರಯೋಜನಕಾರಿಯಾದ ನೀತಿಯನ್ನು ನೀತಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಜಿಲ್ಲೆಯ ಬಿಜೆಪಿ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.ಈ ಸಂದರ್ಭದಲ್ಲಿ
ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಸಂಸದರಾದ ಕ್ಯಾ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು, ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ ಆರ್ವಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕ ವಸಂತ ಪೂಜಾರಿ ಉಪಸ್ಥಿತರಿದ್ದರು.














