ಧರ್ಮಸ್ಥಳ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದ ಬಗ್ಗೆ ಕಳೆದ ಕೆಲವು ದಿನಗಳಿಂದ ಸಮೂಹ ಮಾಧ್ಯಮಗಳಲ್ಲಿ ನಡೆಯುತ್ತಿರುವ ಅಪಪ್ರಚಾರಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಬಿ.ಜೆ.ಪಿ.ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು. ಅವರು ಭಾನುವಾರ ಧರ್ಮಸ್ಥಳಕ್ಕೆ ಭೆಟಿ ನೀಡಿ, ದೇವರ ದರ್ಶನ ಪಡೆದು, ವಿಶೇಷ ಸೇವೆ ಸಲ್ಲಿಸಿದ ಬಳಿಕ
ಮಾಧ್ಯಮದವರೊಂದಿಗೆ ಮಾತನಾಡಿದರು. ಎಸ್ಐಟಿ ತನಿಖೆಯ ನೆಪದಲ್ಲಿ ಧರ್ಮಸ್ಥಳದ ಬಗ್ಗೆ ಸಮೂಹ ಮಾಧ್ಯಮಗಳಲ್ಲಿ ಆಧಾರ ರಹಿತ ಸುಳ್ಳು ವದಂತಿಗಳ ಅಪಪ್ರಚಾರದಿಂದ ಅಸಂಖ್ಯಾತ ಭಕ್ತರು ಹಾಗೂ ಅಭಿಮಾನಿಗಳಲ್ಲಿ ಗೊಂದಲದ ವಾತಾವರಣ ಮೂಡಿದೆ.
ಎಸ್.ಐ.ಟಿ. ತನಿಖೆಯನ್ನು ಬಿ.ಜೆ.ಪಿ. ಸ್ವಾಗತಿಸುತ್ತದೆ. ಆದರೆ, ತನಿಖೆ ಪಾರದರ್ಶಕವಾಗಿ ನಡೆಯಬೇಕು ಎಂದು ಅವರು ಸಲಹೆ ನೀಡಿದರು.

ಶಾಸಕರಾದ ಹರೀಶ್ ಪೂಂಜ, ಛಲವಾದಿ ನಾರಾಯಣಸ್ವಾಮಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಸಿ.ಟಿ. ರವಿ, ಭಾಗೀರಥಿ ಉಮಾನಾಥ ಕೋಟ್ಯಾನ್, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೋಳಿ, ಎಸ್.ಆರ್. ವಿಶ್ವನಾಥ್, ಧನಂಜಯ ಸರ್ಜಿ, ಕಿಶೋರ್ ಕುಮಾರ್ ಬೊಟ್ಯಾಡಿ, ಕೊರಣ್ ಕೊಡ್ಗಿ, ಪ್ರತಾಪಸಿಂಹ ನಾಯಕ್, ಉಮಾನಾಥ ಕೋಟ್ಯಾನ್, ರವಿಕುಮಾರ್, ಮೈಸೂರು, ಶ್ರೀವಾತ್ಸವ ಹಾಗೂ ಅಪಾರ ಸಂಖ್ಯೆಯಲ್ಲಿ ಬಿ.ಜೆ.ಪಿ. ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಳಿಕ ಬಿ.ವೈ ವಿಜಯೇಂದ್ರ ಅವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.






