ಮಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಮುಖಂಡ ಸತೀಶ್ ಕುಂಪಲ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಬಿಜೆಪಿಯ ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪ್ರಕೋಷ್ಠಗಳ ರಾಜ್ಯ ಸಂಯೋಜಕರು ಹಾಗೂ ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳು, ಸಹ ಕಾರ್ಯದರ್ಶಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ದ.ಕ.ಜಿಲ್ಲಾ ಅಧ್ಯಕ್ಷರಾಗಿದ್ದ ಸುದರ್ಶನ ಮೂಡಬಿದ್ರೆ ಅವರ ಅಧ್ಯಕ್ಷತೆಯ ಅವಧಿ ಮುಗಿದ ಹಿನ್ನಲೆಯಲ್ಲಿ ನೂತನ ಜಿಲ್ಲಾಧ್ಯಕ್ಷರ ನೇಮಕ ಆಗಿದೆ.









