ಸುಳ್ಯ: ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಇಂದು ಗುತ್ತಿಗಾರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡರು.ಗುತ್ತಿಗಾರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ

ಬಾಳುಗೋಡು, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ನಕಾರು, ನಡುಗಲ್ಲು, ಮೆಟ್ಟಿನಡ್ಕ, ಗುತ್ತಿಗಾರು ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದರು. ಕಾರ್ಯಕರ್ತರ, ನಾಯಕರ ಭೇಟಿ ಮಾಡಲಾಯಿತು. ಮತದಾರರನ್ನು ಭೇಟಿ ಮಾಡಿ ಮತ ಯಾಚಿಸಲಾಯಿತು. ಅಲ್ಲಲ್ಲಿ ಕಾರ್ಯಕರ್ತರ ಸಭೆ ನಡೆಸಲಾಯಿತು. ಬಿಜೆಪಿ ಮುಖಂಡರು, ಕಾರ್ಯಕರ್ತರು ಅಭ್ಯರ್ಥಿಯ ಜೊತೆಯಲ್ಲಿದ್ದರು. .