ಸುಳ್ಯ: ಲೋಕಸಭಾ ಚುನಾವಣೆಗೆ ಸುಳ್ಯ ವಿಧಾನಸಭೆಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರಾಗಿ ಹರೀಶ್ ಕಂಜಿಪಿಲಿ ನೇಮಕಗೊಂಡಿದ್ದಾರೆ. ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕ ಹಾಗೂ
ಸಹ ಸಂಚಾಲಕರನ್ನು ನೇಮಕ ಮಾಡಲಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರಾಗಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಸಹ ಸಂಚಾಲಕರಾಗಿ ದಿನೇಶ್ ಮೆದು ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕ ಮಾಡಿದ್ದಾರೆ.







