ಸುಳ್ಯ:ಬಿಜೆಪಿ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರು ಹಾಗೂ ನಾಯಕರು ಆ.7 ರಂದು ಭಾಗವಹಿಸಿದ್ದಾರೆ. ಪಾದಯಾತ್ರೆಯ 5ನೇ ದಿನವಾದ ಆ.7ರಂದು ಸುಳ್ಯ ಮಂಡಲದ ವಿವಿಧ ಸ್ಥರದ ನೂರಾರು
ಮಂದಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಶಾಸಕ ಎಸ್.ಅಂಗಾರ,
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮತ್ತಿತರರ ಪ್ರಮುಖರು ಭಾಗವಹಿಸಿದ್ದಾರೆ. ದ.ಕ.ಜಿಲ್ಲೆಯ ವಿವಿಧ ಮಂಡಲಗಳಿಂದ ಇಂದು ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದಾರೆ. ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಪ್ರಮುಖರು ಭಾಗವಹಿಸುತ್ತಿದ್ದಾರೆ.