ಸುಳ್ಯ:ವಿಧಾನ ಪರಿಷತ್ ಚುನಾವಣೆಯ ಸಿದ್ಧತೆ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ವಿಧಾನ ಪರಿಷತ್
ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಜನತಾದಳ ಅಧ್ಯಕ್ಷ ಜಾಕೆ ಮಾಧವ ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ ಮಂಜುಳಾ ರಾವ್, ವಿಧಾನ ಪರಿಷತ್ ಚುನಾವಣೆ ಸಹ ಸಂಚಾಲಕ ವಿಕಾಸ್ ಪುತ್ತೂರು, ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ, ರಾಜ್ಯ ಪ್ರಕೋಷ್ಟ ಸಂಚಾಲಕ್ ದತ್ತಾತ್ರಿ, ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ, ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೋಟ್ಟು, ಮತ್ತಿತರರು ಭಾಗವಹಿಸಿ ಚುನಾವಣಾ ಸಿದ್ಧತೆಯ ಕುರಿತು ಮಾಹಿತಿ ನೀಡಿದರು. ಪ್ರಧಾನ ಕಾರ್ಯದರ್ಶಿಗಳಾದ ವಿನಯ ಕುಮಾರ್, ಪ್ರದೀಪ್ ರೈ ಮನವಳಿಕೆ ಕಾರ್ಯಕ್ರಮ ನಿರ್ವಹಿಸಿದರು.