ಸುಳ್ಯ:ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಮಹಿಳಾ ಸಮಾವೇಶ ಮಾ.19ರಂದು ಸುಳ್ಯ ಕ್ಷೇತ್ರದಲ್ಲಿ ನಡೆಯಲಿದೆ. ಪಂಜ ಅಥವಾ ಸುಬ್ರಹ್ಮಣ್ಯದಲ್ಲಿ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂಬರುವ ವಿಧಾನ ಸಭಾ ಚುನಾವಣೆಗೆ ಪಕ್ಷ ಸಿದ್ಧಗೊಳ್ಳುವ
ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶವನ್ನು ನಡೆಸಲಾಗುತಿದೆ. ಈ ಸಂದರ್ಭದಲ್ಲಿ ಜಿಲ್ಲೆಯ ಪ್ರತಿ ಕ್ಷೇತ್ರದ ಜನ ಸೇವೆ ಮಾಡಿದ, ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಸುಷ್ಮಾ ಸ್ವರಾಜ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಆತ್ಮ ನಿರ್ಭರ ಭಾರತದ ನೆಲೆಯಲ್ಲಿ ಸ್ವಯಂ ಉದ್ಯೋಗ ಮಾಡುವ ಮೂಲಕ ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೂ ಸಮಾವೇಶದಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಚಿವ ಎಸ್.ಅಂಗಾರ,ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ಭಾಗೀರಥಿ ಮುರುಳ್ಯ,ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತ್ರಿವೇಣಿ ಪೆರುವೋಡಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗು ಮಹಿಳಾ ಮೋರ್ಚಾ ಪ್ರಭಾರಿ ಪೂಜಾ ಪೈ, ಕಾರ್ಯದರ್ಶಿ ಜಯಂತಿ, ಉಪಾಧ್ಯಕ್ಷೆ ಪುಷ್ಪಾವತಿ ಬಾಳಿಲ, ಸಮಾವೇಶದ ಸಂಚಾಲಕ ಈಶ್ವರ ಕಟೀಲು, ಮಹಿಳಾ ಮೋರ್ಚಾ ತಾಲೂಕು ಕಾರ್ಯದರ್ಶಿ ತೇಜಸ್ವಿನಿ, ಗೀತಾ ಶೇಖರ್, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಭೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಸಮಿತಿ ಸದಸ್ಯ ವೆಂಕಟ್ ದಂಬೆಕೋಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ಜಿ ನಾಯಕ್, ಯುವ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.