ಸುಳ್ಯ: ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಕಾರ್ಯನಿರ್ವಹಣಾ ತಂಡದ ಸಭೆ ಮತ್ತು ಆಟಿ ಕೂಟ ಕಾರ್ಯಕ್ರಮ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಡಾ.ಮಂಜುಳಾ ರಾವ್ ಅತಿಥಿಯಾಗಿದ್ದರು. ಮಹಿಳಾ ಮೋರ್ಚಾದ ಸುಳ್ಯ ಮಂಡಲದ
ಅಧ್ಯಕ್ಷೆ ಇಂದಿರಾ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಕಾರ್ಯದರ್ಶಿ ಭಾರತಿ ಪುರುಷೋತ್ತಮ್ ಆಟಿಕೂಟದ ಮಹತ್ವವನ್ನು ತಿಳಿಸಿದರು. ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಲಕಿತಾ ಶೆಟ್ಟಿ, ಹಾಗೂ ಸಂಧ್ಯಾ ವೆಂಕಟೇಶ್, ಮಂಡಲದ ಜಿಲ್ಲಾ ಪ್ರಭಾರಿ ಯಶಸ್ವಿನಿ ಶಾಸ್ತ್ರಿ, ಜಿಲ್ಲಾ ಉಪಾಧ್ಯಕ್ಷೆ ಗುಣವತಿ ಕೊಲ್ಲಂತಡ್ಕ ಕಾರ್ಯದರ್ಶಿ ಜಾನ್ಹವಿ ಕಾಂಚೋಡು, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಮಂಡಲದ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಂಡಲ ಉಪಾಧ್ಯಕ್ಷೆ ಹೇಮಾ ಮೋಹನ್ ದಾಸ್ ಪ್ರಾರ್ಥಿಸಿ, ಪ್ರಧಾನ ಕಾರ್ಯದರ್ಶಿಗಳಾದ ಶಶಿಕಲಾ ಎ.ಸ್ವಾಗತಿಸಿ, ಲೋಲಾಕ್ಷಿ ವಂದಿಸಿದರು. ಕಾರ್ಯದರ್ಶಿ ಆಶಾ ರೈ ಕಲಾಯಿ ಕಾರ್ಯಕ್ರಮ ನಿರೂಪಿಸಿದರು. ಆಟಿ ತಿಂಗಳ ವಿಶೇಷ ತಿನಿಸುಗಳನ್ನು ಉಣ ಬಡಿಸಲಾಯಿತು.





