ಸುಳ್ಯ: ಬಿಜೆಪಿ ಸುಳ್ಯ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ ಇಂದು ಫೆ. 24ರಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ಜರುಗಿತು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ ಕಂಜಿಪಿಲಿ ಸಭಾಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ,


ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ. ವಿ.ತೀರ್ಥರಾಮ, ಸುಳ್ಯ ಕ್ಷೇತ್ರದ ಚುನಾವಣಾ ಉಸ್ತುವಾರಿ ಬೆಳ್ತಂಗಡಿಯ ಕುಶಾಲಪ್ಪಗೌಡ ಪೂವಾಜೆ ಉಪಸ್ಥಿತರಿದ್ದರು. ಪಕ್ಷದ ಸಂಘಟನಾತ್ಮಕ ಕೆಲಸ ಕಾರ್ಯಗಳು ಮನೆಮನೆ ಅಭಿಯಾನ ,ಸದಸ್ಯತ್ವ ಅಭಿಯಾನ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾರ್ಯ ಯೋಜನೆಯ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿಯ ವಿವಿಧ ಜವಾಬ್ದಾರಿಯ ಪ್ರಮುಖರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.