ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿಯು ಸಿದ್ಧಪಡಿಸಿರುವ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಭಾನುವಾರ ಬಿಡುಗಡೆ ಮಾಡಲಾಯಿತು.
‘ವಿಕಸಿತ ಭಾರತ’ದ ನೀಲನಕ್ಷೆ ಎಂದೇ ಕರೆಯಲಾಗಿರುವ ಈ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಿಡುಗಡೆಮಾಡಿದರು.ಇಲ್ಲಿನ ಪಕ್ಷದ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ಹಾಗೂ
ಪ್ರಣಾಳಿಕೆ ಸಮಿತಿ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಇತರ ಹಿರಿಯ ನಾಯಕರು ಭಾಗವಹಿಸಿದ್ದರು.
ಗ್ರಾಮೀಣ ರಸ್ತೆಗಳು, ಶೌಚಾಲಯಗಳ ನಿರ್ಮಾಣ, 25 ಕೋಟಿ ಜನರನ್ನು ಬಡತನದಿಂದ ಮುಕ್ತ ಗೊಳಿಸುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕೆಲವು ಸಾಧನೆಗಳಾಗಿವೆ ಎಂದು ಜೆಪಿ ನಡ್ಡಾ ಹೇಳಿದರು. ಯುವಕರು, ಮಹಿಳೆಯರು, ರೈತರು ಮತ್ತು ಬಡವರಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಭರವಸೆಯೂ ಪ್ರಣಾಳಿಕೆಯಲ್ಲಿ ಸ್ಥಾನ ಪಡೆದಿವೆ. ಬಿಜೆಪಿಯು ಪ್ರಣಾಳಿಕೆ ಸಿದ್ಧಪಡಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಮಿತಿಯನ್ನು ನೇಮಕ ಮಾಡಿತ್ತು.
ಪ್ರಣಾಳಿಕೆಯ ಪ್ರಮುಖ ಅಂಶಗಳು:
ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಹಾಗೂ ಏಕರೂಪ ನಾಗರಿಕ ಸಂಹಿತೆ ಉಪಕ್ರಮಗಳನ್ನು ಜಾರಿ
ದೇಶದ ಘನತೆ, ಜನರ ಜೀವನ ಗುಣಮಟ್ಟ ಸುಧಾರಣೆಗೆ ಒತ್ತು
ಪ್ರತಿ ಮನೆಗೆ ಅಗ್ಗದ ಸಿಲಿಂಡರ್ ತಲುಪಿಸಿದಂತೆ ಪೈಪ್ ಮೂಲಕ ಗ್ಯಾಸ್ ತಲುಪಿಸುವ ಕಾರ್ಯ,
ದೇಶದ 10 ಕೋಟಿ ರೈತರಿಗೂ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮುಂದುವರಿಕೆ, 5G ನೆಟ್ವರ್ಕ್ಗಳ ವಿಸ್ತರಣೆ
ಪ್ರಪಂಚದಾದ್ಯಂತ ರಾಮಾಯಣ ಹಬ್ಬಗಳನ್ನು ಆಯೋಜನೆ, ಜನೌಷಧಿ ಕೇಂದ್ರಗಳಲ್ಲಿ ಜನರು ಔಷಧಗಳನ್ನು ಶೇ 80ರಷ್ಟು ರಿಯಾಯಿತಿಯಲ್ಲಿ ಪಡೆಯಲಿದ್ದು ಮುಂದಿನ ದಿನಗಳಲ್ಲಿ ಜನೌಷಧಿ ಕೇಂದ್ರಗಳ ಹೆಚ್ಚಳ
ಆಯುಷ್ಮಾನ್ ಭಾರತ್ ಅಡಿಯಲ್ಲಿ ಜನರು 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಮತ್ತು 70 ವರ್ಷ ದಾಟಿದವರು ಈ ಯೋಜನೆಗೆ ಸೇರ್ಪಡೆ,
ಮುದ್ರಾ ಯೋಜನೆಯಡಿ ಸಾಲದ ಮೊತ್ತವನ್ನು 10 ಲಕ್ಷದಿಂದ 20 ಲಕ್ಷಕ್ಕೆ ಏರಿಕೆ, ದಕ್ಷಿಣ, ಉತ್ತರ ಮತ್ತು ಪೂರ್ವ ಭಾಗದಲ್ಲಿ ಶೀಘ್ರ ಬುಲೆಟ್ ರೈಲು ಸಂಚರಿಸಲಿವೆ, ಈಗಾಗಲೇ ಅಹಮದಾಬಾದ್ – ಮುಂಬೈ ಬುಲೆಟ್ ರೈಲು ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ
ಮೂರು ಕೋಟಿ ಮಹಿಳೆಯರಿಗೆ ಲಕ್ಪತಿ ದೀದಿ ಗ್ಯಾರಂಟಿ ಮತ್ತು ಬಡವರಿಗೆ ಮನೆಗಳ ನಿರ್ಮಾಣ,ಎಐ, ಸೆಮಿಕಂಡಕ್ಟರ್ ಮತ್ತು ಬಾಹ್ಯಾಕಾಶ ವಲಯದ ಪ್ರಗತಿಗೆ ಒತ್ತು. ದೇಶದಲ್ಲಿ ಮೂರು ರೀತಿಯ ವಂದೇ ಭಾರತ್ ರೈಲುಗಳು ಓಡಲಿವೆ, ವಂದೇ ಭಾರತ್ ರೈಲುಗಳನ್ನು ದೇಶದ ಮೂಲೆ ಮೂಲೆಗೆ ವಿಸ್ತರಿಸಲಿದೆ.
ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣ
ಪೈಪ್ಲೈನ್ ಮೂಲಕ ಅಡುಗೆ ಅನಿಲ ಪೂರೈಕೆ
ಕೋಟ್ಯಂತರ ಕುಟುಂಬಗಳಿಗೆ ಸೋಲಾರ್ ಮೂಲಕ ಉಚಿತವಾಗಿ ವಿದ್ಯುತ್ ಪೂರೈಕೆ ಅಮೃತ್ ಭಾರತ್, ವಂದೇ ಭಾರತ್ ರೈಲುಗಳ ಸಂಖ್ಯೆ ಹೆಚ್ಚಳ 10 ಕೋಟಿ ಮಹಿಳೆಯರಿಗೆ ಉದ್ಯೋಗ, ಉದ್ಯಮ ಕುರಿತು ಕೌಶಲ ತರಬೇತಿ,ದೇಶಾದ್ಯಂತ ಡೇರಿ ಸಹಕಾರ ಸಂಘಗಳನ್ನು ಹೆಚ್ಚಿಸಲಾಗುವುದು
ಕ್ರೀಡೆಯಲ್ಲಿ ಸ್ತ್ರೀಯರ ಪ್ರಾತಿನಿಧ್ಯ ಹೆಚ್ಚಿಸಲು ಹೊಸ ಯೋಜನೆ.