ಸುಳ್ಯ: ಭಾರತೀಯ ಜನತಾ ಪಾರ್ಟಿಯ ಮುಂದಿನ ಆರು ವರ್ಷಗಳ ಅವಧಿಯ ಸದಸ್ಯತ್ವ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ದೆಹಲಿಯಲ್ಲಿ ಚಾಲನೆ ನೀಡಿದ್ದು ಈ ಸಂದರ್ಭದಲ್ಲಿ ಶಾಂತಿನಗರ ಬೆಟ್ಟಂಪಾಡಿ 177 ಬೂತ್ ನಲ್ಲಿ ಸದಸ್ಯತ್ವ ಅಭಿಯಾನಕ್ಕೆ
ಹಿರಿಯ ಬಿಜೆಪಿ ಮತದಾರರಾದ ದೇಯ್ಯು ಅಮ್ಮ 8800002024 ಮಿಸ್ಡ್ ಕಾಲ್ ಕೊಟ್ಟು ಸದಸ್ಯತನ ಪಡೆದು ಚಾಲನೆ ನೀಡಿದರು. ಮುಂದಿನ ಒಂದು ತಿಂಗಳ ಕಾಲ ನಡೆಯುವಂತಹ ಸದಸ್ಯತ್ವ ಅಭಿಯಾನದ ಸಂಪೂರ್ಣ ಮಾಹಿತಿಯನ್ನು ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕುಸುಮದಾರ ಎ.ಟಿ. ನೀಡಿದರು.. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಉಪಾಧ್ಯಕ್ಷ ಬುದ್ಧನಾಯ್ಕ್, ನಗರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಾರಾಯಣ.ಎಸ್ ಎಂ, ಅವಿನಾಶ್ ಕುರುಂಜಿ ಬೂತ್ ಅಧ್ಯಕ್ಷರಾದ ಅವಿನ್ ಬೆಟ್ಟಂಪಾಡಿ ಕಾರ್ಯದರ್ಶಿ ಶಿವಪ್ಪ ಕೆ ಮತ್ತು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು