ಸುಳ್ಯ: ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಕ ಉಪಸ್ಥಿತಿಯಲ್ಲಿ ಸುಳ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಿತು. ಸುಳ್ಯ ನಗರದ ಶಾಂತಿನಗರ ಬೂತಿನ ಐತಪ್ಪ ನಾಯ್ಕ ಮತ್ತು ಗೋಪಾಲಕೃಷ್ಣ ಭಟ್ ಅವರ ಮನೆಗೆ ಭೇಟಿ ನೀಡಿ
ಬಿಜೆಪಿ ಸದಸ್ಯರನ್ನಾಗಿ ಮಾಡಲಾಯ್ತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ. ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್.ಎಂ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ. ಎ, ಉಪಾಧ್ಯಕ್ಷ ಬುದ್ಧ ನಾಯ್ಕ, ಬೂತ್ ಅಧ್ಯಕ್ಷ ಅವಿನ್ ಬಿಟ್ಟಂಪಾಡಿ ಪ್ರಮುಖರಾದ ಅಶೋಕ ಅಡ್ಕಾರ್, ವಿಜಯ ಚಾರ್ಮಾತ, ಶಿವಪ್ರಸಾದ್ ದಾಮೋದರ ಮಂಚಿ ಇತರರು ಉಪಸ್ಥಿತರಿದ್ದರು.