ಸುಳ್ಯ:ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿತಾಗಿ ಪೋಸ್ಟ್ ಹಾಕರುವ ಘಟನೆಯನ್ನು ಬಿಜೆಪಿ ಮುಖಂಡರು ಖಂಡಿಸಿದ್ದಾರೆ. ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಸುಳ್ಯ ಯುವ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ ಸೇರಿ ಹಲವು ಮಂದಿ ಖಂಡಿಸಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದವರ ವಿರುದ್ಧ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಬೇಕು.ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ ವ್ಯಕ್ತಿಯ ವಿರುದ್ಧ ಕೂಡಲೇ ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












