ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷ ಸತೀಶ್ ಕುಂಪಲ ಅವರ ಪದಗ್ರಹಣ ಸಮಾರಂಭ ನಡೆಯಿತು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಜಯಗಳಿಸುವ ಗುರಿ ಇದೆ. ಚುನಾವಣೆ ಯಾವ ಕ್ಷಣದಲ್ಲಿಯೂ ಘೋಷಣೆಯಾಗಬಹುದು, ಕಾರ್ಯಕರ್ತರು ಸಿದ್ಧರಾಗಿರುವಂತೆ ಕರೆ ನೀಡಿದ್ದಾರೆ.ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು
ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಸಭಾ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡುತ್ತಾ, ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕರ್ನಾಟದಲ್ಲಿ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದರು.
ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ಜಿಲ್ಲಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ನೂತನ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ನಿರ್ಗಮನ ಅಧ್ಯಕ್ಷ ಸುದರ್ಶನ ಮೂಡುಬಿದಿರೆ,
ಮಾಜಿ ಸಚಿವ ಡಾ.ಅಶ್ವಥ ನಾರಾಯಣ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಭರತ್ ಶೆಟ್ಟಿ, ಉಮಾನಾಥ ಕೊಟ್ಯಾನ್, ಭಾಗೀರಥಿ ಮುರುಳ್ಯ, ಪ್ರತಾಪ ಸಿಂಹ ನಾಯಕ್, ಬಿಜೆಪಿ ಪದಾಧಿಕಾರಿಗಳಾದ ಬೃಜೇಶ್ ಚೌಟ, ನಿತಿನ್ ಕುಮಾರ್, ರಾಜೇಶ್, ಉದಯ ಕುಮಾರ್ ಶೆಟ್ಟಿ, ಗೋಪಾಲ ಕೃಷ್ಣ ಹೇರಳೆ, ವಿ.ಬಿ.ಭಾರತೀಶ್, ರಾಜೇಶ್ ಕಾವೇರಿ, ರಾಮದಾಸ್ ಬಂಟ್ವಾಳ, ಪ್ರಶಾಂತ್ ಕೆಡಿಂಜ, ಮನಪಾ ಮೇಯರ್ ಸುಧೀರ್ ಶೆಟ್ಟಿ,ಉಪ ಮೇಯರ್ ಸುನೀತಾ ಉಪಸ್ಥಿತರಿದ್ದರು.










