ಸುಳ್ಯ: ನೂತನ ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿರುವ ಹಿನ್ನಲೆಯಲ್ಲಿ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಬೀಗ ಜಡಿದ ಘಟನೆ ನಡೆದಿದೆ. ಸುಳ್ಯ ಬಿಜೆಪಿ ಮಂಡಲ ಸಮಿತಿಯ ಹೊಸ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಿರುವ
ಹಿನ್ನಲೆಯಲ್ಲಿ ಹಾಲಿ ಇರುವ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಪ್ರಮುಖರು ಹಾಗೂ ಮಹಾ ಶಕ್ತಿ ಕೇಂದ್ರ, ಶಕ್ತಿ ಕೇಂದ್ರದ ಸಭೆ ನಡೆಸಿದ್ದಾರೆ. ಸಭೆಯ ಮುಗಿಸಿ ಮುಖಂಡರು ಹೊರ ಬರುತ್ತಿದ್ದಂತೆ ಕಾರ್ಯಕರ್ತರು ಕಚೇರಿಗೆ ಬೀಗ ಜಡಿದರು. ಅಧ್ಯಕ್ಷರ ನೇಮಕ ಸಂಬಂಧಪಟ್ಟು ಅಸಮಾಧಾನವನ್ನು ಸರಿಪಡಿಸುವ ತನಕ ಬಿಜೆಪಿ ಮಂಡಲ ಸಮಿತಿ ಯಾವುದೇ ಚಟುವಟಿಕೆಗಳನ್ನು ನಡೆಸುವುದಿಲ್ಲ ಎಂದು ಪ್ರಮುಖರು ಸಭೆಯಲ್ಲಿ ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಾರ್ಯಕರ್ತರು ಕಚೇರಿಗೆ ಬೀಗ ಜಡಿಯಲಾಯಿತು. ಅಸಮಾಧಾನ ಸರಿಪಡಿಸುವ ತನಕ ಕಚೇರಿ ತೆರೆಯುವುದಿಲ್ಲ ಎಂದು ಕಾರ್ಯಕರ್ತರು ತಿಳಿಸಿದರು.









