ಸುಳ್ಯ: ಸುಳ್ಯ ಬಿಜೆಪಿ ಮಂಡಲ ಸಮಿತಿಯ ನೂತನ ಕಾರ್ಯಾಲಯ ಸುಳ್ಯ ನಗರದ ಅಂಬೆಡ್ಕದಲ್ಲಿ ಉದ್ಘಾಟನೆಗೊಂಡಿತು. ಮಾಜಿ ಮುಖಮಂತ್ರಿ ಹಾಗೂ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್.ಯಡಿಯೂರಪ್ಪ ನೂತನ ಕಚೇರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ
ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಶಾಸಕ ಎಸ್.ಅಂಗಾರ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಜೆಡಿಎಸ್ ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಠಿಕಾನ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎ.ಟಿ.ಕುಸುಮಾಧರ, ಮುಖಂಡರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಎ.ವಿ.ತೀರ್ಥರಾಮ ಮತ್ತಿತರರು ಉಪಸ್ಥಿತರಿದ್ದರು. ಸುಳ್ಯಕ್ಕೆ ಆಗಮಿಸಿದ ಯಡಿಯೂರಪ್ಪ ಅವರಿಗೆ ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು.