ಸುಳ್ಯ: ಬಿಜೆಪಿ ಮಂಡಲ ಅಧ್ಯಕ್ಷರ ನೆಮಕಾತಿ ವಿಚಾರದಲ್ಲಿ ಉಂಟಾದ ಅಸಮಾಧಾನದ ಹಿನ್ನಲೆಯಲ್ಲಿ ಕಾರ್ಯಕರ್ತರು ಬೀಗ ಜಡಿದಿದ್ದ ಬಿಜೆಪಿ ಸುಳ್ಯ ಮಂಡಲ ಸಮಿತಿ ಇಂದು ಮತ್ತೆ ತೆರದುಕೊಂಡಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಇಂದು ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯ ಬಿಜೆಪಿ ಕೋರ್ ಕಮಿಟಿ ಹಾಗೂ ಪ್ರಮುಖರ ಜೊತೆ ಜಿಲ್ಲಾಧ್ಯಕ್ಷರು ಮಾತುಕತೆ ನಡೆಸುತ್ತಿದ್ದಾರೆ.ವೆಂಕಟ್ ವಳಲಂಬೆಯವರನ್ನು ಸುಳ್ಯ ಬಿಜೆಪಿ
ಮಂಡಲ ಅಧ್ಯಕ್ಷ ರಾಗಿ ನೇಮಕಗೊಳಿಸಿದ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ ಉಲ್ಬಣಗೊಂಡು ನಾಯಕರು ಸಭೆ ನಡೆಸಿ ಅಸಹಕಾರ ಘೋಷಣೆ ಮಾಡಿದ್ದರು. ಕಾರ್ಯಕರ್ತರು ಕಚೇರಿಗೆ ಬೀಗ ಜಡಿದಿದ್ದರು. ನಿನ್ನೆ ನಡೆದ ಬಿಜೆಪಿ ಜಿಲ್ಲಾ ಸಮಿತಿ ಸಭೆಯಲ್ಲಿ ಈ ವಿಷಯ
ಪ್ರಸ್ತಾಪ ಆಗಿ. ಜಿಲ್ಲಾಧ್ಯಕ್ಷರು ಹಾಗೂ ಪ್ರಮುಖರು ಬಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾತುಕತೆ ನಡೆಸುವುದಾಗಿ ತೀರ್ಮಾನಿಸಲಾಗಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪ್ರಮುಖರು ಸುಳ್ಯಕ್ಕೆ ಆಗಮಿಸಿ ಪ್ರಮುಖರೊಂದಿಗೆ ಚರ್ಚೆ ಆರಂಭಿಸಿದ್ದಾರೆ. ನಿನ್ನೆ ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ನೂತನ ಅಧ್ಯಕ್ಷ ವೆಂಕಟ್ ವಳಲಂಬೆ ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.