ಕಡಬ:ಬಿಜೆಪಿ ಸುಳ್ಯ ಮಂಡಲದ ವತಿಯಿಂದ ವಿ.ಬಿ. ಜಿ ರಾಮ್ ಜಿ ಯೋಜನೆ ಬಗ್ಗೆ ಜನಜಾಗೃತಿ ಮೂಡಿಸಲು ಹೊಸಮಠದಿಂದ ಕಡಬದವರೆಗೆ ಬೃಹತ್ ಪಾದಯಾತ್ರೆ ನಡೆಯಿತು.
ಮುಖಂಡರು ಕಾರ್ಯಕರ್ತರು ಸೇರಿ ನೂರಾರು ಮಂದಿ ಕೇಸರಿ ಧ್ವಜಗಳನ್ನು ಹಿಡಿದು, ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆಯಲ್ಲಿ
ಪಾಲ್ಗೊಂಡರು. ‘ವಿ.ಬಿ. ಜಿ ರಾಮ್ ಜಿ’ ಯೋಜನೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವುದು ಮತ್ತು ಅದರ ಪ್ರಯೋಜನಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ಈ ಪಾದಯಾತ್ರೆಯ ಉದ್ದೇಶವಾಗಿತ್ತು. ಸಾರ್ವಜನಿಕರಿಗೆ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಕರಪತ್ರಗಳನ್ನು ಹಂಚಲಾಯಿತು.

ಉಡುಪಿ-ಚಿಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಮುಖರಾದ ಹರೀಶ್ ಕಂಜಿಪಿಲಿ, ಕೃಷ್ಣ ಶೆಟ್ಟಿ ಕಡಬ, ರಾಕೇಶ್ ರೈ ಕೆಡೆಂಜಿ, ವೆಂಕಟ್ ದಂಬೆಕೋಡಿ, ವಿನಯಕುಮಾರ್ ಕಂದಡ್ಕ, ಪ್ರದೀಪ್ ರೈನವಳಿಕೆ, ಆರ್.ಕೆ.ಭಟ್ ಕುರಬುಡೇಲು, ಶ್ರೀಕಾಂತ್ ಮಾವಿನಕಟ್ಟೆ, ಆಶಾ ತಿಮ್ಮಪ್ಪ ಮತ್ತಿತರರು ಉಪಸ್ಥಿತರಿದ್ದರು.






