ಸುಳ್ಯ::ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಬೆಳ್ಳಾರೆಯಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆ ನಡೆಯಿತು. ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಬಳಿಯಿಂದ ಆರಂಭಗೊಂಡು ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿ ರೋಡ್ ಶೋ ನಢಯುತು. ಬಳಿಕ ಬಸ್ ನಿಲ್ದಾಣದ ಬಳಿಯಲ್ಲಿ ಸಾರ್ವಜನಿಕ ಚುನಾವಣಾ
ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ್ ಶೇಣವ, ಬಿಜೆಪಿ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಅಭ್ಯರ್ಥಿ ಭಾಗೀರಥಿ ಮುರುಳ್ಯ, ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕ ಎ.ವಿ. ತೀರ್ಥರಾಮ, ಮಾತನಾಡಿದರು.
ವೇದಿಕೆಯಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬುಡಿಯಾರು ರಾಧಾಕೃಷ್ಣ ರೈ, ಬಿಜೆಪಿ ದ.ಕ. ಜಿಲ್ಲಾ ಕಾರ್ಯದರ್ಶಿ ಕೇಶವ ಭಟ್ ಮುಳಿಯ, ಜಿ.ಪಂ. ಮಾಜಿ ಸದಸ್ಯ ಎಸ್.ಎನ್. ಮನ್ಮಥ, ಸುಳ್ಯ ನ.ಪಂ. ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹರೀಶ್ ಕಂಜಿಪಿಲಿ ಸ್ವಾಗತಿಸಿ, ಬಿಜೆಪಿ ಮಂಡಲ ಸಮಿತಿ ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ ವಂದಿಸಿದರು. ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ಬೆಳ್ಳಾರೆ ಬಿಜೆಪಿ ಮಹಾಶಕ್ತಿಕೇಂದ್ರದ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.