ಸುಳ್ಯ:ಬಿಜೆಪಿ ಸುಳ್ಯ ಮಂಡಲ ಸಮಿತಿಯ ವತಿಯಿಂದ ‘ವಿಕಸಿತ ಭಾರತ’ ಕಾರ್ಯಕರ್ತರ ಪ್ರಶಿಕ್ಷಣ ವರ್ಗ ಪೆರುವಾಜೆಯ ಜೆಡಿ ಆಡಿಟೋರಿಯಂನಲ್ಲಿ ನಡೆಯಿತು. ಶಾಸಕಿ ಭಾಗೀರತಿ ಮುರುಳ್ಯ ಉದ್ಘಾಟಿಸಿದರು.ಮಾಜಿ ಶಾಸಕ ಎಸ್. ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವಕಟ್ ವಳಲಂಬೆ,ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಜಿಲ್ಲಾ ಪ್ರಶಿಕ್ಚಣ ಪ್ರಮುಖರಾದ
ವಿಶ್ವೇಶ್ವರ ಭಟ್ ಬಂಗಾರಡ್ಕ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವಕಟ್ ವಳಲಂಬೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ ವಂದಿಸಿದರು. ಕುಸುಮಾಧರ ಎ.ಟಿ. ಕಾರ್ಯಕ್ರಮ ನಿರೂಪಿಸಿದರು.
ಜಿಲ್ಲಾ ಪ್ರಶಿಕ್ಚಣ ಪ್ರಮುಖರಾದ ವಿಶ್ವೇಶ್ವರ ಭಟ್ ಬಂಗಾರಡ್ಕ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್ ಪ್ರಶಿಕ್ಷಣ ವರ್ಗ ನಡೆಸಿದರು. ನೂರಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು. ಲೋಕಸಭಾ ಚುನಾವಣೆಯ ಸಿದ್ಧತೆಯ ಹಿನ್ನಲೆಯಲ್ಲಿ ಪ್ರಶಿಕ್ಷಣ ವರ್ಗ ಏರ್ಪಡಿಸಲಾಗಿತ್ತು.









