ಸುಳ್ಯ:ಅಡಿಕೆ ಬೆಳೆಗಾರರ ಸಮಸ್ಯೆಯನ್ನು ಕೇಂದ್ರ ಸರಕಾರ ಪರಿಹರಿಸುತ್ತದೆ ಎಂಬ ಭರವಸೆ ಇದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.ಅಡಿಕೆ ಕೃಷಿಕರ ಸಮಸ್ಯೆಯ ಬಗ್ಗೆ ಕೇಂದ್ರ ಸಚಿವರ ಗಮನಕ್ಕೆ ತಂದು ಅವರ ಸೂಚನೆಯ ಮೇರೆಗೆ ತಜ್ಞರ ಮೂಲಕ ಈಗಾಗಲೇ ಸಮೀಕ್ಷೆ ನಡೆಸಲಾಗಿದೆ. ಶಾಶ್ವತ ಪರಿಹಾರ
ಮಾಡುತ್ತಾರೆ ಎಂಬ ವಿಶ್ವಾಸ ಇದೆ. ಕಾಂಗ್ರೆಸ್ ಸರಕಾರ ಮತ್ತು ಸಚಿವರುಗಳು ಸುಳ್ಯದ ಅಭಿವೃದ್ಧಿಗೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಲಿ ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ಮಾಡಿ ಸಾವಿರಾರು ಕೋಟಿ ಅನುದಾನ ನೀಡುವ ಭರವಸೆ ನೀಡಿದರೂ, ಸುಳ್ಯಕ್ಕೆ ಏನು ಬಂದಿದೆ ಎಂದು ಬಿಜೆಪಿ ಮೇಲೆ ಆರೋಪ ಮಾಡುವ ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಲಿ.
ಬಿಜೆಪಿ ಸರಕಾರ ಇರುವ ಸಮಯದಲ್ಲಿ ಮಾಡಿದ ಅಭಿವೃದ್ಧಿ ಕೆಲಸದ ಬಗ್ಗೆ ಜನರಿಗೆ ತಿಳಿಸುತ್ತೇವೆ. ಕಾಂಗ್ರೆಸ್ ಸರಕಾರ ಮಾಡಿರುವ ಅಭಿವೃದ್ಧಿ ಕೆಲಸವನ್ನು ಜನರಿಗೆ ತಿಳಿಸಲಿ. ಅಧಿಕಾರ ಇದ್ದರೂ ಏನೂ ಅಭಿವೃದ್ಧಿ ಮಾಡದೆ ಕಾಂಗ್ರೆಸ್ ಮುಖಂಡರು ಬಿಜೆಪಿ ಮೇಲೆ ಆರೋಪ ಮಾಡುವುದು ಅವರಿಗೆ ಶೋಭೆಯಲ್ಲ.ಇದಕ್ಕೆ ಮುಂದಿನ ಚುನಾವಣೆಯಲ್ಲಿ ಜನರು ಉತ್ತರ ನೀಡಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.








