ಬೆಂಗಳೂರು::ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು. ಮಲ್ಲೇಶ್ವರಂನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಿದರು. ವಿಜಯೇಂದ್ರ ಅವರನ್ನು
ರಾಜ್ಯಾಧ್ಯಕರ ಕುರ್ಚಿ ಮೇಲೆ ಕುಳ್ಳಿರಿಸಿ, ಶಾಲು ಹೊದಿಸಿ, ಬಿಜೆಪಿ ಬಾವುಟ ನೀಡಿ ಅಧಿಕಾರ ಹಸ್ತಾಂತರ ಮಾಡಲಾಯಿತು.ಈ ಸಂದರ್ಭದಲ್ಲಿ ಯಡಿಯೂರಪ್ಪ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಮುನಿರತ್ನ, ಅಶೋಕ್, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ಶಾಸಕರು, ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.ಬಳಿಕ ವಿಜಯೇಂದ್ರ ಹಿರಿಯರ ಆಶೀರ್ವಾದ ಪಡೆದರು. ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.ಪದಗ್ರಹಣ ಹಿನ್ನೆಲೆಯಲ್ಲಿ ಹೋಮ, ಪೂಜಾ ಕಾರ್ಯಕ್ರಮಗಳು ನಡೆಯಿತು.









