ಸುಳ್ಯ:ಹಿಂದೂ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ ಎಂದು ಬಿಜೆಪಿ ಹೇಳಿದೆ.ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರ ವಿನಯಕುಮಾರ್ ಮುಳುಗಾಡು ಮತ್ತು ಸುಳ್ಯ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ. ಪುತ್ತೂರಿನಲ್ಲಿ ನಡೆದ
ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದ ಭಾಷಣಕ್ಕೆ ಸಂಬಂಧಿಸಿ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಜಿಲ್ಲಾ ಬಿ.ಜೆ.ಪಿ. ಮತ್ತು ಸುಳ್ಯ ಮಂಡಲ ತೀವ್ರವಾಗಿ ಖಂಡಿಸುತ್ತೇವೆ. ಇದು ಕಾಂಗ್ರೆಸ್ನ ರಾಜಕೀಯ ಪ್ರೇರಿತ ಕ್ರಮವಾಗಿದೆ. ಪವಿತ್ರ ಓಂಕಾರ ಧ್ವಜದ ಬಗ್ಗೆ ಹಿರಿಯ ಕಾಂಗ್ರೆಸ್ ಮುಖಂಡ ರಮಾನಾಥ ರೈಯವರು ನೀಡಿದ ಹೇಳಿಕೆಯನ್ನು ಖಂಡಿಸುವುದಾಗಿ ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಂಡಲ ಕೋಶಾಧಿಕಾರಿ ಸುಭೋದ್ ಶೆಟ್ಟಿ ಮೇನಾಲ, ಬಿಜೆಪಿ ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎ.ಟಿ.ಕುಸುಮಾಧರ, ಪಕ್ಷದ ಪ್ರಮುಖರಾದ ಜಗನ್ನಾಥ ಜಯನಗರ, ರಾಜೇಶ್ ಮೇನಾಲ, ನಾರಾಯಣ ಶಾಂತಿನಗರ ಉಪಸ್ಥಿತರಿದ್ದರು.












