ಸುಳ್ಯ:ಲೋಕಸಭಾ ಚುನಾವಣೆಯ ಸಿದ್ಧತೆಯ ಹಿನ್ನಲೆಯಲ್ಲಿ ಬಿಜೆಪಿ ವತಿಯಿಂದ ಮತದಾರ ಚೇತನಾ ಅಭಿಯಾನ ನಡೆಸಲಾಗುತ್ತಿದೆ. ಜಿಲ್ಲಾ ತಂಡ ಶಾಸಕರ ಮತ್ತು ಮುಖಂಡರ ಜೊತೆ ಸುಳ್ಯದಲ್ಲಿ ಸಭೆ ನಡೆಸಲಾಗಿದೆ. ಬೂತ್ ಮಟ್ಟದಲ್ಲಿ ಸಂಘಟನಾತ್ಮಕವಾಗಿ ಚುನಾವಣಾ ತಯಾರಿ ನಡೆಸಲಾಗುತಿದೆ ಎಂದರು. ಕಳೆದ ಒಂಭತ್ತು ವರ್ಷದಲ್ಲಿ ಕೇಂದ್ರ ಸರಕಾರದ ಅಭಿವೃದ್ಧಿ ಸಾಧನೆ, ಜನ ಸಾಮಾನ್ಯರ ಬದುಕಿನಲ್ಲಿ ಆದ
ಅಮೂಲಾಗ್ರ ಬದಲಾವಣೆಯ ಹಿನ್ನಲೆಯಲ್ಲಿ 3ನೇ ಅವಧಿಗೆ ಕೇಂದ್ರದಲ್ಲಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಬಿಜೆಪಿ ಸಿದ್ಧತೆ ನಡೆಸಿದೆ ಎಂದರು.
ಗ್ಯಾರಂಟಿಯಿಂದ ಅಭಿವೃದ್ಧಿಗೆ ಬರ:
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿಗೆ ಬರ ಉಂಟಾಗಿದೆ ಎಂದು ಪ್ರತಾಪ ಸಿಂಹ ನಾಯಕ್ ಹೇಳಿದರು. ರಾಜ್ಯದಲ್ಲಿ ಜನರಿಗೆ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ 100 ದಿನದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿ ಅಭಿವೃದ್ಧಿಗೆ ಅನುದಾನವೇ ಇಲ್ಲದ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎಂದರು. ಬಿಜೆಪಿ ಸರಕಾರ ಜಾರಿಗೆ ತಂದ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರಕಾರ ನಿಲ್ಲಿಸುತಿದೆ, ರೈತ ಸಮ್ಮಾನ್, ವಿದ್ಯಾನಿಧಿ ಸೇರಿ ಹಲವು ಯೋಜನೆಗಳನ್ನು ರದ್ದು ಮಾಡಿದೆ. 200 ಯೂನಿಟ್ ಉಚಿತ ಎಂದು ಹೇಳಿದರೂ ರಾಜ್ಯದಲ್ಲಿ ಸರಾಸರಿ 67 ಯೂನಿಟ್ ಮಾತ್ರ ಉಚಿತ ನೀಡಲಾಗುತಿದೆ. ವಿದ್ಯುತ್ ಉತ್ಪಾದನಾ ವ್ಯವಸ್ಥೆ ಮಾಡಲಾಗುತ್ತಿಲ್ಲ. ಮಳೆಗಾಲದಲ್ಲಿಯೇ ಲೋಡ್ ಶೆಡ್ಡಿಂಗ್ ಮಾಡ್ತಾ ಇದೆ. ಯುವಕರಿಗೆ ಕೊಡುವುದಾಗಿ ಹೇಳಿದ ಗ್ಯಾರಂಟಿ ಇನ್ಬೂ ನೀಡಲಿಲ್ಲ. ಬರ ಬಂದಿದ್ದರೂ ಬರ ಘೋಷಣೆ ಮಾಡಿಲ್ಲ ಎಂದು ಅವರು ಹೇಳಿದರು.

11 ರಂದು ಪ್ರತಿಭಟನೆ: ಕಂಜಿಪಿಲಿ
ರಾಜ್ಯ ಸರಕಾರದ ಕಾರ್ಯ ವೈಖರಿಯನ್ನು ವಿರೋಧಿಸಿ ಬಿಜೆಪಿ ರೈತ ಮೋರ್ಚಾದ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಸೆ.11ರಂದು ಪ್ರತಿಭಟನಾ ಸಭೆ ನಡೆಯಲಿದೆ ಎಂದು ಬಿಜೆಪಿ
ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದ್ದಾರೆ.
110 ಕೆ.ವಿ ಸಬ್ ಸ್ಟೇಷನ್ ಆದಷ್ಟು ಬೇಗ ಕಾಮಗಾರಿ ಆರಂಭಿಸಲಾಗುವುದು. ಈ ಕುರಿತು ಶಾಸಕರು ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ ಎಂದರು.
ಬಿಜೆಪಿ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಯನ್ನು ನಾವು ಮಾಡಿಸಿದ್ದು ಎಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ.
110 ಬಿಜೆಪಿ ಅವಧಿಯಲ್ಲಿ ಆಗಿದೆ. ಉಬರಡ್ಕದಲ್ಲಿ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕಕ್ಕೆಅನುದಾನ ಬಿಡುಗಡೆ ಮಾಡಿದ್ದು ಬಿಜೆಪಿ ಸರಕಾರ. ಆದರೆ ಅದನ್ನು ನಾವು ಮಾಡಿಸಿದ್ದು ಎಂದು ಕೆಲವು ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ನಮ್ಮ ಅವಧಿಯಲ್ಲಿ ಆದ ಕೆಲಸವನ್ನು ತಮ್ಮದು ಎಂದು ಹೇಳುವ ಕಾಂಗ್ರೆಸ್ಸಿಗರು ಸ್ವತಃ ಅನುದಾನ ತರಿಸಿ ತಮ್ಮದು ಎಂದು ಹೇಳಲಿ. ಸರಕಾರದಿಂದ ಅಭಿವೃದ್ಧಿಗೆ ಹೊಸ ಅನುದಾನ ತರಲಿ ಎಂದು ಕಂಜಿಪಿಲಿ ಟಾಂಗ್ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ,
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ದೇವಿದಾಸ್ ಶೆಟ್ಟಿ ಬಂಟ್ವಾಳ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ರೈತ ಮೋರ್ಚಾ ಮಂಡಲ ಅಧ್ಯಕ್ಷ ರಮೇಶ್ ಕಲ್ಪುರೆ, ಜಿಲ್ಲಾ ಉಪಾಧ್ಯಕ್ಷ ಮಹೇಶ್ ಕುಮಾರ್ ರೈ ಮೇನಾಲ, ಕೃಷ್ಣ ಶೆಟ್ಟಿ ಕಡಬ ಉಪಸ್ಥಿತರಿದ್ದರು.