ಕಡಬ:ರಾಜ್ಯ ಸರಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವುದರ ವಿರುದ್ಧ ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಜೂ.20ರಂದು ಕಡಬದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಯಿತು. ಮಂಡಲ ಕೇಂದ್ರಗಳಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲು
ರಾಜ್ಯ ಬಿಜೆಪಿ ಸಮಿತಿಯು ಕರೆ ನೀಡಿರುವ ಹಿನ್ನಲೆಯಲ್ಲಿ ಕಡಬ ಪೇಟೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷ ರಾಕೇಶ್ ರೈ ಕಡೆಂಜಿ ಮಂಡಲಧ್ಯಕ್ಷ ವೆಂಕಟ್ ವಳಲಂಬೆ,ಪ್ರದಾನ ಕಾರ್ಯದರ್ಶಿ ವಿನಯಕಂದಡ್ಕ,ಪ್ರ ದೀಪ್ ರೈ ಮನವಳಿಕೆ ಸೇರಿದಂತೆ ಬಿ.ಜೆ.ಪಿ ಜಿಲ್ಲಾ,ಮಂಡಲ,ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ,ಬೂತ್ ಸಮಿತಿ ಅಧ್ಯಕ್ಷರು ,ಕಾರ್ಯದರ್ಶಿ, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು