ಮಂಗಳೂರು:ರಾಜ್ಯದಲ್ಲಿ ಪೆಟ್ರೋಲ್ ಡಿಸೇಲ್ ದರ ಏರಿಕೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಮಂಗಳೂರು ನಗರದ ಪಿ.ವಿ.ಎಸ್ ಜಂಕ್ಷನ್ ಬಳಿ ಪ್ರತಿಭಟನೆ ನಡೆಯಿತು.ತೆಂಗಿನಕಾಯಿಯ ಗೆರಟೆ,ಚೆಂಬು, ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಹಗ್ಗ ಕಟ್ಟಿ ಕಾರನ್ನು ಎಳೆಯುವ ಮೂಲಕ ವಿನೂತನ ರೀತಿಯಲ್ಲಿ
ಪ್ರತಿಭಟಿಸಿದರು.ಪೆಟ್ರೋಲ್ ಬಂಕ್ ವರೆಗೆ ಪ್ರತಿಭಟನಾ ಸೂಚಕವಾಗಿ ಹಗ್ಗದ ಸಹಾಯದಿಂದ ವಾಹನಗಳನ್ನು ಎಳೆದುಕೊಂಡು ಬಂದ ಬಿಜೆಪಿ ಕಾರ್ಯಕರ್ತರು ನಗರದ ಪಿ.ವಿ.ಎಸ್ ಜಂಕ್ಷನ್ ನಿಂದ ನವಭಾರತ್ ಸರ್ಕಲ್ ವರೆಗೆ ಜಾಥಾ ನಡೆಸಿದರು. ಚೆಂಬುವಿನಲ್ಲಿ ಹಣ ಸಂಗ್ರಹಿಸಿ ಬಿಜೆಪಿ ನಾಯಕರು, ಕಾರ್ಯಕರ್ತರು ವಾಹನಗಳಿಗೆ ಪೆಟ್ರೋಲ್ ತುಂಬಿಸಿದರು.
ಕಾಂಗ್ರೆಸ್ ಸರಕಾರ ಜನ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜೇಯೇಂದ್ರ ನೇತೃತ್ವದಲ್ಲಿ ರಾಜ್ಯದ ಎಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ. ಪೆಟ್ರೋಲ್ ಡೀಸೆಲ್ ಬೆಲೆ ರಾಜ್ಯ ಸರಕಾರ ಇಳಿಕೆ ಮಾಡುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಸಂಸದ ಕ್ಯಾಪ್ಟನ್ ಬ್ರಜೇಶ್ ಚೌಟ ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು,ಪಕ್ಷದ ಮುಖಂಡರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರವೀಂದ್ರ ಶೆಟ್ಟಿ ಉಳಿದೋಟ್ಟು, ಪ್ರೇಮಾನಂದ ಶೆಟ್ಟಿ, ಕಿಶೋರ್ ಪುತ್ತೂರು,ಯತೀಶ್ ಅರ್ವರ, ಸಂಜಯ ಪ್ರಭು, ಪೂಜಾ ಪೈ, ಕವಿತಾ ಸನಿಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.