ಸುಳ್ಯ:ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅರಾಜಕತೆ ಸೃಷ್ಠಿಯಾಗಿದೆ, ಬೆಲೆ ಏರಿಕೆಯೂ ಮಿತಿ ಮೀರಿದೆ, ಕೊಲೆಗಳು ಅಧಿಕವಾಗುತಿದೆ, ಕೃಷಿಕರಿಗೆ ಬೆಳೆ ವಿಮೆ ನೀಡುವ ವ್ಯವಸ್ಥೆಗೆ ಇನ್ನೂ ಮುಂದಾಗಿಲ್ಲ ಎಂದು ಆರೋಪಿಸಿ ಬಿಜೆಪಿ ಮಂಡಲ ಸಮಿತಿ ವತಿಯಿಂದ

ರಾಜ್ಯ ಸರಕಾರದ ವಿರುದ್ಧ ಸುಳ್ಯ ತಾಲೂಕು ಕಚೇರಿ ಎದುರುಗಡೆ ಪ್ರತಿಭಟನಾ ಧರಣಿ ನಡೆಸಲಾಯಿತು. ಕಾರ್ಯಕರ್ತರನ್ನುದ್ಧೇಶಿಸಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹಿರಿಯರಾದ ಡಾ. ರಾಮಯ್ಯ ಭಟ್, ಮಾಜಿ ಜಿ.ಪಂ. ಸದಸ್ಯ ಎಸ್.ಎನ್.ಮನ್ಮಥ, ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ನ.ಪಂ.ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಮತ್ತಿತರರು ಮಾತನಾಡಿದರು.
ಧರಣಿಯ ಬಳಿಕ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.