ಪೆರ್ಲ:ಮಂಗಳವಾರ ಕೇರಳ ವಿಧಾನಸಭಾ ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನವಾಗಿದ್ದು ಈ ಹಿನ್ನೆಲೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಪ್ರಚಾರ ಕಾರ್ಯದಲ್ಲಿ
ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಭಾಗವಹಿಸಿದರು. ಪೆರ್ಲ ಮುಖ್ಯರಸ್ತೆಯಲ್ಲಿ
ಮಂಜೇಶ್ವರ ಎನ್ ಡಿ ಎ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಪರವಾಗಿ ಬೃಹತ್ ರೋಡ್ ಶೋ ನಡೆಸಿದರು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಗಳೂರು ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮತ್ತಿತರರು ರೋಡ್ಶೋದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಂಜೇಶ್ವರ ಎನ್ ಡಿ ಎ ಅಭ್ಯರ್ಥಿ ಶ್ರೀ ಕೆ. ಸುರೇಂದ್ರನ್ ಹಾಗೂ ಸ್ಥಳೀಯ ಬಿಜೆಪಿ ನಾಯಕರು, ಸುಳ್ಯ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಉಪಸ್ಥಿತರಿದ್ದರು. ಅಣ್ಣಾಮಲೈ ಅವರು ಕೇರಳದ ಎಲ್.ಡಿ.ಎಫ್ ಮತ್ತು ಯುಡಿಎಫ್ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ವಿಕಸಿತ ಕೇರಳಂಗಾಗಿ ಎನ್ ಡಿ ಎ ಬೆಂಬಲಿಸುವಂತೆ ಅವರು ಮನವಿ ಮಾಡಿದರು.










