ಸುಳ್ಯ: ಏ.26ರಂದು ಲೋಕಸಭಾ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಏ.24ರಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು ಈ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಸುಳ್ಯ ನಗರದಲ್ಲಿ ರೋಡ್ ಶೋ ನಡೆಯಿತು. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ
ಕಾರ್ಯಕರ್ತರು ಒಟ್ಟಾಗಿ ಜ್ಯೋತಿ ವೃತ್ತದ ಬಳಿಯಿಂದ ಹೊರಟ ರೋಡ್ ಶೊ ಗಾಂಧಿನಗರದ ತನಕ ಸಾಗಿತು. ಮಹಿಳೆಯರು ಸೇರಿದಂತೆ ಕಾರ್ಯಕರ್ತರು ಬಿಜೆಪಿ ಹಾಗೂ ಜೆಡಿಎಸ್ ಧ್ವಜ ಹಿಡಿದು ಮೆರವಣಿಗೆಯಲ್ಲಿ ಸಾಗಿ ಮತ ಯಾಚಿಸಿದರು. ಅಂಗಡಿ ಮುಂಗಟ್ಟುಗಳಲ್ಲಿ ಮನವಿ ಪತ್ರ ನೀಡಿ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಮತ ಯಾಚನೆ ಮಾಡಲಾಯಿತು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಜೆಡಿಎಸ್ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಮುಖಂಡರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಎಸ್.ಎನ್.ಮನ್ಮಥ, ಹರೀಶ್ ಕಂಜಿಪಿಲಿ, ಸುಬೋದ್ ಶೆಟ್ಟಿ ಮೇನಾಲ, ವಿನಯಕುಮಾರ್ ಕಂದಡ್ಕ, ರಾಕೇಶ್ ಕುಂಠಿಕಾನ,ಎ.ಟಿ.ಕುಸುಮಾಧರ ಮತ್ತಿತರರು ಇದ್ದರು.