ಸುಳ್ಯ: ಸುಳ್ಯ ಬಿಜೆಪಿ ಮಂಡಲ ಸಮಿತಿಯ ಹೊಸ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಿರುವ ಹಿನ್ನಲೆಯಲ್ಲಿ ಹಾಲಿ ಇರುವ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದಿ ಪ್ರಮುಖರು ಸಭೆ ನಡೆಸುತ್ತಿದ್ದಾರೆ. ಕೋರ್ ಕಮಿಟಿ ಶಿಫಾರಸ್ಸು ಮಾಡಿದವರನ್ನು ಅಧ್ಯಕ್ಷರನ್ನಾಗಿ ಮಾಡದಿರುವುದು ಸುಳ್ಯದ ಪ್ರಮುಖರ ಅಸಮಾಧಾನಕ್ಕೆ

ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಶನಿವಾರ ರಾತ್ರಿ ಕೋರ್ ಕಮಿಟಿ ಸದಸ್ಯರು ಹಾಗೂ ಮಂಡಲ ಪ್ರಮುಖರು ಸಭೆ ನಡೆಸಿದ್ದರು. ಆ ಸಭೆಯಲ್ಲಿ ಆದ ತೀರ್ಮಾನದ ಹಿನ್ನಲೆಯಲ್ಲಿ ಇಂದು ಕ್ಷೇತ್ರದ ಬಿಜೆಪಿ ಪ್ರಮುಖರ ಸಭೆ ಬಿಜೆಪಿ ಮಂಡಲ ಸಮಿತಿ ಕಚೇರಿಯಲ್ಲಿ ಭಾನುವಾರ ನಡೆಯಯುತಿದೆ. ಸಭೆಯಲ್ಲಿ ಕ್ಷೇತ್ರದ ಪ್ರಮುಖರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಸೇರಿ ಕಿಕ್ಕಿರಿದು ಸೇರಿದ್ದಾರೆ.


ಮಂಡಲ ಸಮಿತಿಯಿಂದ ಚರ್ಚೆ ನಡೆಸಿ ಅಧ್ಯಕ್ಷ ಸ್ಥಾನಕ್ಕೆ ವಿನಯ ಮುಳುಗಾಡು ಅವರ ಹೆಸರನ್ನು ಜಿಲ್ಲಾ ಸಮಿತಿಗೆ ಕಳುಹಿಸಲಾಗಿತ್ತು. ಆದರೆ ಪಟ್ಟಿಯಲ್ಲಿ ಇಲ್ಲದ ವೆಂಕಟ್ ವಳಲಂಬೆಯವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಇದು ಕೋರ್ ಕಮಿಟಿಯನ್ನು ಕಡೆಗಣಿಸಿಸಂತಾಗಿದೆ ಎಂಬುದು ಪ್ರಮುಖರ ಅಭಿಪ್ರಾಯ.
ಹಲವು ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಭೆಯ ಬಳಿಕ ನಿರ್ಧಾರವನ್ನು ಪ್ರಮುಖರು ತಿಳಿಸುವ ಸಾಧ್ಯತೆ ಇದೆ.










