ಮಂಗಳೂರು: ದೇಶದ ಜನರು ನರೇಂದ್ರ ಮೋದಿಯವರ ಆಶ್ವಾಸನೆಗಳನ್ನು ನಂಬಿದ್ದಾರೆ. ಹಾಗಾಗಿ ರಾಜ್ಯದ ಜನತೆ ನರೇಂದ್ರ ಮೋದಿ ಪರ ಇದ್ದಾರೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರಿನ ಸಂಘನಿಕೇತನದಲ್ಲಿ ನಡೆದ
ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಮಂಗಳೂರು ಮುಂಬೈನ ಬಹಳ ದೊಡ್ಡ ಸಂಪರ್ಕ ಕಲ್ಪಿಸುವ ದೊಡ್ಡ ಸೇತುವೆಯಾಗಿದೆ. ಬಿಜೆಪಿಯ ಬೆಳವಣಿಗೆಗಾಗಿ ಮಂಗಳೂರಿನ ಅನೇಕರು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. 2024ರ ಚುನಾವಣೆ ಹೊಸ ಇತಿಹಾಸ ನಿರ್ಮಿಸುವ ಚುನಾವಣೆಯಾಗಿದೆ ಎಂದರು.ಪ್ರತಿ ಐದು ವರ್ಷಗಳಿಗೊಮ್ಮೆ ನಾವು ಸರ್ಕಾರವನ್ನು ಆಯ್ಕೆ ಮಾಡುತ್ತೇವೆ. ಆದರೆ, ಪ್ರಧಾನಿ ಮೋದಿ 10 ವರ್ಷಗಳಲ್ಲಿ 100 ವರ್ಷಗಳ ಕೆಲಸವನ್ನು ಮಾಡಿದ್ದಾರೆ ಎಂದರು.
ಸಮಾವೇಶದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿ, ಶಾಸಕರಾದ ಭಾಗೀರಥಿ ಮುರುಳ್ಯ, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಉಮಾನಾಥ ಕೋಟ್ಯಾನ್, ರಾಜೇಆ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಶಾಸಕರು, ಪ್ರಮುಖರು ಮತ್ತು ಸಂಖ್ಯೆಯಲ್ಲಿ ಬೂತ್ ಕಾರ್ಯಕರ್ತರು ಭಾಗವಹಿಸಿದ್ದರು.









