ಸುಳ್ಯ:ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಸುಳ್ಯ ಮಂಡಲ ಕಾರ್ಯಕರ್ತರ ಸಮಾವೇಶ ಸುಳ್ಯ ಕೇರ್ಪಳದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ಮಾ.29ರಂದು ನಡೆಯಿತು.
ಸಮಾವೇಶವನ್ನು ಉದ್ಘಾಟಿಸಿದ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ,ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕಿ ಭಾಗೀರಥಿ ಮುರುಳ್ಯ,ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಸಚಿವ ಎಸ್.ಅಂಗಾರ, ಸುಳ್ಯ ಮಂಡಲ ಉಸ್ತುವಾರಿಗಳಾದ ಅಪ್ಪಯ್ಯ ಮಣಿಯಾಣಿ, ಸೀತಾರಾಮ ಬೆಳಾಲು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ
ಯತೀಶ್ ಆರ್ವಾರ್, ಕಿಶೋರ್ ಕುಮಾರ್ ಬೊಟ್ಯಾಡಿ, ಕಾರ್ಯದರ್ಶಿ ವಿನಯಕುಮಾರ್ ಮುಳುಗಾಡು, ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕ ದೇವದಾಸ ಶೆಟ್ಟಿ,ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರಾದ ಹರೀಶ್ ಕಂಜಿಪಿಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ ಸ್ವಾಗತಿಸಿದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ವಂದಿಸಿದರು.
ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ.ಕಾರ್ಯಕ್ರಮ ನಿರೂಪಿಸಿದರು.