ಸುಳ್ಯ: ಮೂರನೇ ಅವಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿರುವ ಹಿನ್ನಲೆಯಲ್ಲಿ ಸುಳ್ಯ ಮಂಡಲದಲ್ಲಿ ವಿವಿಧ ಕಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪ್ರಮಾಣ ವಚನ ಸ್ವೀಕಾರದ ನೇರ ಪ್ರಸಾರ ವೀಕ್ಷಣೆ ಮಾಡಿದ ಕಾರ್ಯಕರ್ತರು ಹಾಗೂ
ಪ್ರಮುಖರು ಸಿಹಿ ತಿಂಡಿ ಹಂಚಿ, ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮವನ್ನು ಆಚರಿಸಿದರು.ಪ್ರಮಾಣ ವಚನ ಆರಂಭಕ್ಕೆ ಸುಮಾರು ಒಂದು ಗಂಟೆಗೂ ಮುನ್ನ ಪಟಾಕಿ ಸಿಡಿಯಲು ಆರಂಭಿಸಿತ್ತು. ಸುಳ್ಯ,ಬೆಳ್ಳಾರೆ, ಪೈಚಾರ್, ಜಾಲ್ಸೂರು, ಕೋಲ್ಚಾರ್, ಕಡಬ ಸೇರಿದಂತೆ ವಿವಿಧ ಕಡೆಗಳಲ್ಲಿ ಪಕ್ಷದ ಧ್ವಜ ಹಿಡಿದು ಘೋಷಣೆ ಕೂಗಿದರು. ಪಟಾಕಿ

ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಿಸಿದರು.
ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಕಡೆ ಸಿಹಿ ತಿಂಡಿ ಹಂಚುವ ಕಾರ್ಯಕ್ರಮ, ಚಹಾಕೂಟ, ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.









