ಮಂಗಳೂರು: ದ ಕ ಜಿಲ್ಲಾ ಬಿಜೆಪಿ ವತಿಯಿಂದ ನೂತನವಾಗಿ ಆಯ್ಕೆಯಾದ ಶಾಸಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ
ಶಾಸಕ ಭರತ್ ಶೆಟ್ಟಿ, ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ಮಂಗಳೂರಿನಲ್ಲಿ ನಡೆದ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸನ್ಮಾನಿಸಿದರು. ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ ಸಿಂಹ ನಾಯಕ್, ಬಿಜೆಪಿ ಮುಖಂಡರಾದ ರಾಮ್ದಾಸ್ ಬಂಟ್ಚಾಳ್, ಕಸ್ತೂರಿ ಪಂಜ, ಗೋಪಾಲಕೃಷ್ಣ ಹೇರಳೆ ಮತ್ತಿತರರು ಉಪಸ್ಥಿತರಿದ್ದರು.