ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಇಂದು ಪ್ರಕಟವಾಗಿದೆ.ಕರ್ನಾಟಕ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭ್ಯರ್ಥಿಯಾಗಿದ್ದಾರೆ. ಹಾಲಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ಟಿಕೆಟ್ ಕೈ ತಪ್ಪಿದೆ. ಉಡುಪಿ ಚಿಕ್ಕಮಗಳೂರು ಕ್ಷೆತ್ರಕ್ಕೆ
ಕೋಟ ಶ್ರೀನಿವಾಸ ಪೂಜಾರಿ ಅಭ್ಯರ್ಥಿಯಾಗಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಅಭ್ಯರ್ಥಿಯಾಗಿದ್ದಾರೆ. ಡಿ.ವಿ.ಸದಾನಂದ ಗೌಡ ಅವರಿಗೆ ಟಿಕೆಟ್ ತಪ್ಪಿದೆ. ಮೈಸೂರು-ಕೊಡಗು ಕ್ಷೇತ್ರಕ್ಕೆ ಸಂಸದ ಪ್ರತಾಪಸಿಂಹ ಅವರಿಗೆ ಟಿಕೆಟ್ ಕೈ ತಪ್ಪಿದೆ.ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭ್ಯರ್ಥಿಯಾಗಿದ್ದಾರೆ.
ಕರ್ನಾಟಕದಲ್ಲಿ ಟಿಕೆಟ್ ಪಡೆದವರು:
ದಕ್ಷಿಣ ಕನ್ನಡ: ಕ್ಯಾ. ಬ್ರಿಜೇಶ್ ಚೌಟ
ಉಡುಪಿ–ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ
ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ
ಚಿಕ್ಕೋಡಿ: ಅಣ್ನಾ ಸಾಹೇಬ್ ಶಂಕರ್ ಜೊಲ್ಲೆ
ಬಾಗಲಕೋಟೆ: ಪಿ.ಸಿ ಗದ್ದಿಗೌಡರ
ಬಿಜಾಪುರ: ರಮೇಶ ಜಿಗಜಿಣಗಿ
ಗುಲ್ಬರ್ಗ: ಡಾ. ಉಮೇಶ್ ಜಾಧವ್
ಬೀದರ್: ಭಗವಂತ ಖೂಬಾ
ಕೊಪ್ಪಳ: ಬಸವರಾಜ ಕ್ಯಾವತ್ತೂರ
ಬಳ್ಳಾರಿ: ಶ್ರೀರಾಮುಲು
ಹಾವೇರಿ: ಬಸವರಾಜ ಬೊಮ್ಮಾಯಿ
ಧಾರವಾಡ: ಪ್ರಲ್ಹಾದ ಜೋಶಿ
ದಾವಣಗೆರೆ: ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ: ಬಿ.ವೈ ರಾಘವೇಂದ್ರ
ತುಮಕೂರು: ವಿ. ಸೋಮಣ್ಣ
ಚಾಮರಾಜನಗರ: ಎಸ್. ಬಾಲರಾಜ್
ಬೆಂಗಳೂರು ಗ್ರಾಮಾಂತರ: ಡಾ. ಸಿ.ಎನ್ ಮಂಜುನಾಥ್
ಬೆಂಗಳೂರು ಕೇಂದ್ರ: ಪಿ.ಸಿ ಮೋಹನ್
ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ









