ಸುಳ್ಯ: ಬಿಜೆಪಿಯ ಸ್ಥಾಪನ ದಿನಾಚರಣೆ ಎ.6ರಂದು ನಡೆಯಿತು. ಬಿಜೆಪಿ ಸುಳ್ಯ ಮಂಡಲದ ವಿವಿಧ ಬೂತ್ಗಳಲ್ಲಿ ಬಿಜೆಪಿ ಧ್ವಜಾರೋಹಣ ಮಾಡಿ, ಪಕ್ಷದ ಸ್ಥಾಪಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ದಿನಾಚರಣೆ ನಡೆಯಿತು. ಮಂಡಲದ 120ಕ್ಕೂ ಅಧಿಕ

ಬೂತ್ಗಳಲ್ಲಿ ಕಾರ್ಯಕ್ರಮ ನಡೆಯಿತು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎ.ಟಿ.ಕುಸುಮಾಧರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ವಿನಯಕುಮಾರ್ ಮುಳುಗಾಡು, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಮಂಡಲ ಪದಾಧಿಕಾರಿಗಳು ಹಾಗೂ ಪ್ರಮುಖರು ವಿವಿಧ ಬೂತ್ಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.