ಸುಬ್ರಹ್ಮಣ್ಯ : ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಸೇವಾ ಪಾಕ್ಷಿಕದ ಅಂಗವಾಗಿ ಅ.2 ಗಾಂಧಿ ಜಯಂತಿಯಂದು ಸ್ವಚ್ಛತಾ ಕಾರ್ಯಕ್ರಮ ನಢಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಕನ್ನಡಿ ಹೊಳೆ ಮತ್ತು ಕುಮಾರಧಾರ ನದಿಯ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ ನೀಡಿದರು. ಕುಕ್ಕೆ ಸುಬ್ರಹ್ಮಣ್ಯ
ದೇವಸ್ಥಾನದ
ವ್ಯವಸ್ಥಾಪನಅ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ,ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ,ಪ್ರಮುಖರಾದ ಎ.ವಿ.ತೀರ್ಥರಾಮ ,ಆಶಾ ತಿಮ್ಮಪ್ಪ, ಮುಳಿಯ ಕೇಶವ ಭಟ್,ಕೃಷ್ಣ ಶೆಟ್ಟಿ ಕಡಬ ,ಹಾಗೂ ಮಂಡಲ ವ್ಯಾಪ್ತಿಯ ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ, ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಮತ್ತು ಸಹಕಾರಿ ಸಂಘಗಳ ಜನಪ್ರತಿನಿಧಿಗಳು, ಮಂಡಲ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಅಧ್ಯಕ್ಷ, ಕಾರ್ಯದರ್ಶಿಗಳು ಮತ್ತು ಶಕ್ತಿ ಕೇಂದ್ರ ಪ್ರಮುಖರು ಪಾಲ್ಗೊಂಡಿದ್ದರು.