ಚಾಮರಾಜನಗರ: ಬಿಜೆಪಿಯ ಚುನಾವಣಾ ಪ್ರಚಾರ ಅಭಿಯಾನ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಚಾಲನೆ ನೀಡಿದರು.ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ಡ್ರಮ್ ಬಾರಿಸುವ ಮೂಲಕ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ
ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಗೃಹಸಚಿವ ಆರಗ ಜ್ಞಾನೇಂದ್ರ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಹಿರಿಯ ನಾಯಕರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ಮಾಡಿಕೊಂಡು 150 ಕ್ಕೂ ಹೆಚ್ಚು ರೋಡ್ ಶೋ ಮಾಡಲಾಗುತ್ತದೆ. ಎಂಟು ಸಾವಿರ ಕಿ.ಮೀ. ದೂರ ಕ್ರಮಿಸುವ ನಿರೀಕ್ಷೆಯನ್ನು ಇಡಲಾಗಿದೆ. ಮಾರ್ಚ್ 1 ರಿಂದ ಆರಂಭವಾಗುವ ಯಾತ್ರೆ ಮಾರ್ಚ್ 20 ರಂದು ಮುಗಿಯಲಿದೆ.
30 ಅಡಿ ಎತ್ತರದ ಹಾಗೂ ಎಂಟು ಅಡಿ ಅಗಲದ ಬಸ್ನ್ನು ಯಾತ್ರೆಗಾಗಿ ವಿನ್ಯಾಸ ಮಾಡಲಾಗಿದೆ.