ಸುಳ್ಯ: ನರೇಂದ್ರ ಮೋದಿ ಅವರು 4399 ದಿನಗಳ ಸುದೀರ್ಘ ಅವಧಿಗೆ ಪ್ರಧಾನಿಯಾಗಿ ದಾಖಲೆ ನಿರ್ಮಿಸಿರುವ ಹಿನ್ನಲೆಯಲ್ಲಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ,ಹಾಗೂ ಮಹಾಮಂಗಳಾರತಿಯನ್ನು ಸಲ್ಲಿಸಲಾಯಿತು. ಭಾರತದ
ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸತತ 4398 ದಿನಗಳ ಆಡಳಿತದ ದಾಖಲೆಯನ್ನು ದಾಟಿ, ಅತ್ಯಂತ ದೀರ್ಘಾವಧಿಗೆ ಸತತವಾಗಿ ಪ್ರಧಾನಿಯಾಗಿ ದಾಖಲೆ ಮಾಡಿರುವ ಮೋದಿ ಅವರ ಮುಂದಿನ ಜನಸೇವೆಯ ಪಥಕ್ಕೆ ಶಕ್ತಿ ತುಂಬಲು ವಿಶೇಷ ಪ್ರಾರ್ಥನೆ ಹಾಗೂ ಪೂಜೆಯನ್ನು ನೆರವೇರಿಸಲಾಯಿತು ಎಂದು ಬಿಜೆಪಿ ಮಂಡಲ ಸಮಿತಿ ಪ್ರಮುಖರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ,ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ,ಜಿಲ್ಲಾ ಕಾರ್ಯದರ್ಶಿ ಪುಷ್ಪ ಮೇದಪ್ಪ, ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಪ್ರಮುಖ ಅಜಿತ್ ಕಿಲಂಗೋಡಿ, ಕಾರ್ಯದರ್ಶಿ ಶಿವಪ್ರಸಾದ್ ನಡುತೋಟ, ಚಂದ್ರಶೇಖರ ಪನ್ನೆ, ಹರ್ಷಿತ್ ಪೆರುವಾಜೆ,ಪ್ರಸಾದ್ ಕಾಟೂರು, ಕುಶಾಲಪ್ಪ ಪೆರುವಾಜೆ ಹಾಗೂ ಪಕ್ಷದ ಕಾರ್ಯಕರ್ತರು,ಹಿತೈಷಿಗಳು ಉಪಸ್ಥಿತರಿದ್ದರು.













