ಸುಳ್ಯ: ಬಿಜೆಪಿ ಸುಳ್ಯ ಮಂಡಲ ವತಿಯಿಂದ ಯೋಗ ದಿನಾಚರಣೆ ಕೇರ್ಪಳ ಶ್ರೀ ದುರ್ಗಾಪರಮೇಶದವರಿ ಸಭಾಭವನದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ಸುಳ್ಯ ಶಾಖೆಯ ನಿಶಿತಾ ನವೀನ್, ಸುಳ್ಯ ಬಂಟರ ಭವನ ಶಾಖೆಯ

ಸುನಿತಾ ಕರುಣಾಕರ,ಹೇಮನಾಥ ಕುತ್ತಿಮುಂಡ ಯೋಗದ ಮಹತ್ವವನ್ನು ಯೋಗ ಪಟುಗಳಿಗೆ ತಿಳಿಸಿದರು.ಸಂದರ್ಭದಲ್ಲಿ ಮಾಜಿ ಸಚಿವ ಎಸ್ ಅಂಗಾರ, ಮಂಡಲ ಸಮಿತಿಯ ಅಧ್ಯಕ್ಷ ವೆಂಕಟ್ ವಳಲಂಬೆ, ವಿಕಸಿತ ಭಾರತ ಸಂಕಲ್ಪದಿಂದ ಸಾಧನೆಯವರೆಗೆ ಸಮಿತಿಯ ಜಿಲ್ಲಾ ಸಂಚಾಲಕ ಹರೀಶ ಕಂಜಿಪಿಲಿ, ಜಿಲ್ಲಾ ಉಪಾಧ್ಯಕ್ಷ ರಾಕೇಶ ರೈ,ಕಾರ್ಯದರ್ಶಿ ವಿನಯ್ ಮುಳುಗಾಡು, ವಿಕಸಿತ ಭಾರತ ಸಂಕಲ್ಪ ಅಭಿಯಾನದ ಸುಳ್ಯ ಮಂಡಲ ಸಂಚಾಲಕಿ ಪುಲಸ್ಯ ರೈ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯ್ ಕುಮಾರ್ ಕಂದಡ್ಕ, ಪ್ರದೀಪ್ ರೈ, ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಮಾಜಿ ಅಧ್ಯಕ್ಷ ಎ.ವಿ ತೀರ್ಥರಾಮ, ಮಹಿಳಾಮೊರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ,ಪಕ್ಷದ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.