ಸುಳ್ಯ:ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ವಿವಿಧ ತಂಡಗಳಾಗಿ ಮನೆ ಮನೆ ಭೇಟಿ ನೀಡಿ ಪ್ರಚಾರ ಕೈಗೊಂಡರು. ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ ಅವರ ನೇತೃತ್ವದಲ್ಲಿ ಕಾಸರಗೋಡು ಕ್ಷೇತ್ರದ
ಎನ್. ಡಿ.ಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಪರವಾಗಿ ಚುನಾವಣಾ ಪ್ರಚಾರ ಕಾರ್ಯ ನಡೆಸಿದರು. ಕಾಸರಗೋಡಿನ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಯಿತು.ಈ ಸಂದರ್ಭದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಎಸ್.ಎನ್.ದೇವಿಪ್ರಸಾದ್ ಕೊಪ್ಪತ್ತಡ್ಕ, ಪದ್ಮನಾಭ ಬೀಡು,ಪ್ರಭಾಕರ ಕುತ್ಯಾಡಿ,ಶೇಖರ ಮಡ್ತಿಲ,ವಿನಯ್ ಕೋಡ್ತಿಲು, ಚಂದ್ರಕಾಂತ ಕೋಡ್ತಿಲು ಮತ್ತಿತರರು ಇದ್ದರು.

ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ ನೇತೃತ್ವದ ತಂಡ ಕಾಸರಗೋಡು ಕ್ಷೇತ್ರದ ಅಭ್ಯರ್ಥಿ ಎಂ ಎಲ್ ಅಶ್ವಿನಿ ಪರವಾಗಿ, ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಸಬ್ರುಕಜೆ, ಕೊಡಂಕಿರಿ ಭಾಗಗಳಲ್ಲಿ ಮತಯಾಚನೆ ನಡೆಸಿದರು.ಬಿಜೆಪಿ ದ.ಕ.ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಗೋವಿಂದ ಅಳವುಪಾರೆ ಮತ್ತಿತರರು ಉಪಸ್ಥಿತರಿದ್ದರು.










