ಬೆಂಗಳೂರು:ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಭಾನುವಾರ ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ಸ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ಹಸ್ತಾಂತರಿಸಿದರು. ಸಾವಿರಾರು
ಕಾರ್ಯಕರ್ತರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
71 ವರ್ಷದ ಬಿ.ಕೆ. ಹರಿಪ್ರಸಾದ್ ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿ,ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ 2028ರ ವಿಧಾನಸಭೆ ಮತ್ತು 2029ರ ಲೋಕಸಭೆ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಬಿ.ಕೆ. ಹರಿಪ್ರಸಾದ್ ಅವರು ಕಾಂಗ್ರೆಸ್ನ ನಾಯಕತ್ವ ವಹಿಸಿಕೊಂಡಿದ್ದಾರೆ.







