ಮಂಗಳೂರು:ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟದ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ. ಕೆ.ಹರಿಪ್ರಸಾದ್ ಅವರನ್ನು ಮಂಗಳೂರು ಸರ್ಕ್ಯುಟ್ ಹೌಸ್ ನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು. ವಿವಿಧ
ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲಾಯಿತು. 9/11 ಸಮಸ್ಯೆ, ಕನ್ವರ್ಷನ್, ವಿನ್ಯಾಸ ನಕ್ಷೆ ಅನುಮೋದನೆ, ಕಟ್ಟಡ ಪರವಾನಿಗೆ ಮೊದಲಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕರಾವಳಿ ಜಿಲ್ಲೆಗಳಿಗೆ ಏಕರೂಪ ನಿಯಮಗಳನ್ನು ಪಾಲಿಸಲು ಪ್ರತ್ಯೇಕ ವಲಯ ನಿಯಮಾವಳಿ ರಚಿಸಬೇಕು,ಪ್ರಸ್ತುತ ಕರಾವಳಿ ಜಿಲ್ಲೆಗಳು ಮೈಸೂರು ವಿಭಾಗಕ್ಕೆ ಸೇರಿದ್ದು ಮಂಜೂರಾತಿ ವಿಳಂಬ ಗೊಳ್ಳುತ್ತಿದೆ ಮಂಗಳೂರಿನಲ್ಲಿ ಜಂಟಿ ನಿರ್ದೇಶಕರ ಕಚೇರಿ ಸ್ಥಾಪಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ನಿಯೋಗ ಬೇಡಿಕೆ ಸಲ್ಲಿಸಿದರು.ನಿಯೋಗದಲ್ಲಿ
ಒಕ್ಕೂಟದ ಸಂಚಾಲಕ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ್ ಹೇರೂರ್, ಒಕ್ಕೂಟದ ಸಂಚಾಲಕ ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಫ ಸುಳ್ಯ, ಮೂಡಬಿದ್ರಿ ನಗರ ಯೋಜನಾ ಪ್ರಾಧಿಕಾರ ಸದಸ್ಯ ಶೇಖರ ಪೂಜಾರಿ, ಉಡುಪಿ ಪ್ರಾಧಿಕಾರ ಸದಸ್ಯರಾದ ಗಿರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು










