ಸುಳ್ಯ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮೇ.2 ರಂದು ಸುಳ್ಯಕ್ಕೆ ಭೇಟಿ ನೀಡಿದರು. ಸುಳ್ಯದ ಕಾಂಗ್ರೆಸ್ ಚುನಾವಣಾ ಕಚೇರಿಗೆ ಆಗಮಿಸಿದ ಅವರನ್ನು ಕಾಂಗ್ರೆಸ್ ಮುಖಂಡರು ಹೂಗುಚ್ಛ ನೀಡಿ ಸ್ವಾಗತಿಸಿದರು. ಕಾಂಗ್ರೆಸ್ ಮುಖಂಡರ ಜೊತೆ ಮಾತುಕತೆ ನಡೆಸಿದ ಅವರು ಚುನಾವಣಾ ಪ್ರಚಾರದ ಬಗ್ಗೆ ಮಾಹಿತಿ
ಪಡೆದುಕೊಂಡು ಸಲಹೆ ಸೂಚನೆಗಳನ್ನು ನೀಡಿದರು. ಬಳಿಕ ಐವರ್ನಾಡಿಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದರು. ಐವರ್ನಾಡಿನ ನಿಡುಬೆಗೆ ಭೇಟಿ ನೀಡಿ ಮತದಾರರ ಜೊತೆ ಮಾತುಕತೆ ನಡೆಸಿದರು. ನಿಡುಬೆ ತಮಿಳು ಕಾಲನಿಯಲ್ಲಿ ಹರಿಪ್ರಸಾದ್ ಅವರು ತಮಿಳಿನಲ್ಲಿ ಭಾಷಣ ಮಾಡಿ ಗಮನ ಸೆಳೆದರು. ಕಾಂಗ್ರೆ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರಿಗೆ ಮತ ನೀಡುವಂತೆ ತಮಿಳಿನಲ್ಲಿ ಮಾತನಾಡಿ ಮತದಾರರಲ್ಲಿ ಮನವಿ ಮಾಡಿದರು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ವಿಧಾನ ಕ್ಷೇತ್ರದ ಉಸ್ತುವಾರಿ ಎಂ.ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಕೆಪಿಸಿಸಿ ಅಲ್ಪ ಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ, ಕೆಪಿಸಿಸಿ ಸಂಯೋಜಕ ಎಸ್.ಸಂಶುದ್ದೀನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಮುಖಂಡರಾದ ದಿನೇಶ್ ಅಂಬೆಕಲ್ಲು, ಸುರೇಶ್ ಎಂ.ಎಚ್, ಮೂಸಾ ಕುಂಞಿ ಪೈಂಬೆಚ್ಚಾಲ್, ಶಾಫಿ ಕುತ್ತಮೊಟ್ಟೆ,ಸಿದ್ದಿಕ್ ಕೊಕ್ಕೊ, ಹಮೀದ್ ಕುತ್ತಮೊಟ್ಟೆ, ಜಂಶೀರ್ ಶಾಲೆಕ್ಕಾರ್ ಮತ್ತಿತರರು ಉಪಸ್ಥಿತರಿದ್ದರು.