ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಎಲ್.ಎ -2 ವಿಶೇಷ ಸಭೆ ಮತ್ತು ಕಾರ್ಯಾಗಾರ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ಮತದಾರರ ಪಟ್ಟಿ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಮತದಾರರ ಮ್ಯಾಪಿಂಗ್ ಕಾರ್ಯ ಅತೀ ಶೀಘ್ರದಲ್ಲಿ ಪೂರ್ಣಗೊಳ್ಳಲಿದ್ದು, ಮತದಾರರ ಮ್ಯಾಪಿಂಗ್ ಕಾರ್ಯವನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ನಡೆದ
ಕಾರ್ಯಾಗಾರದಲ್ಲಿ ದ ಕ ಜಿಲ್ಲಾ ವೀಕ್ಷಕರು ಹಾಗು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಭಾಗವಹಿಸಿ ಮಾರ್ಗದರ್ಶನ ನೀಡಿದರು. ವಿಧಾನ ಸಭಾ ಕ್ಷೇತ್ರದಲ್ಲಿ 8594ರಷ್ಟು ಮತದಾರರ ಮ್ಯಾಪಿಂಗ್ ಕಾರ್ಯ ಇನ್ನೂ ಬಾಕಿಯಿದ್ದು, ಇದರಲ್ಲಿ ಸುಳ್ಯ ಬ್ಲಾಕ್ ವ್ಯಾಪ್ತಿಯಲ್ಲಿ 4799 ಮತದಾರರ ಮ್ಯಾಪಿಂಗ್ ಬಾಕಿ ಇರುತ್ತದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಈ ಬಗ್ಗೆ ಬೂತ್ವಾರು ಮತದಾರರ ಮ್ಯಾಪಿಂಗ್ ಪ್ರಗತಿಗೆ ಸಹಕಾರ ನೀಡಬೇಕು. ಬಿಎಲ್ಒಗಳಿಗೆ ಕಾರ್ಯಕರ್ತರು ಪೂರ್ಣ ಸಹಕಾರ ನೀಡುವಂತೆ ಅವರು ಕರೆ ನೀಡಿದರು.
ಸುಳ್ಯ ವಿಧಾನಸಭಾ ಕ್ಷೇತ್ರದ ವೀಕ್ಷಕ ಎಂ.ಎಸ್.ಮಹಮ್ಮದ್ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು. ಕಾರ್ಮಿಕರ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಗ್ಯಾರಂಟಿ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಎಂ.ವೆಂಕಪ್ಪ ಗೌಡ, ಪಿ.ಸಿ.ಜಯರಾಮ, ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಅಂಬೆಕಲ್ಲು, ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಅಬ್ದುಲ್ ಗಫೂರ್ ಕಲ್ಮಡ್ಕ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ ವಂದಿಸಿದರು. ಸಭೆಯಲ್ಲಿ ಎಲ್ಲಾ ಬಿ.ಎಲ್.ಎ -2 ಗಳು, ಪಕ್ಷದ ಮುಖಂಡರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು,ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.














