ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ಬೋಳ್ಳೂರು ನೇಮಕಗೊಂಡಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬೊಳ್ಳೂರು ಅವರನ್ನು ನೇಮಕ ಮಾಡಿದ್ದು,ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ನೇಮಕಾತಿ ಆದೇಶವನ್ನು ಹಸ್ತಾಂತರ ಮಾಡಿದರು. ಡಿಸಿಸಿ ಕಾರ್ಯದರ್ಶಿಯಾಗಿರುವ ಬೊಳ್ಳೂರು ಈ ಹಿಂದೆ
ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಪಿಎಂಸಿ ಉಪಾಧ್ಯಕ್ಷರಾಗಿ, ಅಮರ ಮುಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ತಾಲೂಕ್ ಪಂಚಾಯತ್ ಸದಸ್ಯರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೆ ಡಿ ಪಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಕಾಂಗ್ರೆಸ್ ಮುಖಂಡರಾಗುದ್ದ ಬೊಳ್ಳೂರು ಕಾಂಗ್ರೆಸ್ ನೇತೃತ್ವದೊಂದಿಗೆ ಮುನಿಸಿಕೊಂಡು ಕೆಲವು ವರ್ಷಗಳ ಹಿಂದೆ ಬಿಜೆಪಿ ಸೇರ್ಪಡೆಗೊಂಡು ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿದಂತೆ ವಿವಿಧ

ಹುದ್ದೆಗಳ ಅಲಂಕರಿಸಿದ್ದರು. ಎರಡು ವರ್ಷಗಳ ಹಿಂದೆ ಮತ್ತೆ ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದರು. ಬಳಿಕ ಪಕ್ಷ ಅವರನ್ನು ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ ಮಾಡಿತ್ತು. ಇದೀಗ ಬ್ಲಾಕ್ ಕಾಂಗ್ರೆಸ್ ಕಾಂಗ್ರೆಸ್ ಅಧ್ಯಕ್ಷತೆ ನೀಡಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪಿ.ಸಿ.ಜಯರಾಮ ಅವರ ಅವಧಿ ಮುಗಿದ ಹಿನ್ನಲೆಯಲ್ಲಿ ಇದೀಗ ಹೊಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ಮಾಡಲಾಗಿದೆ.