ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಅಧಿಕಾರ ಸ್ವೀಕರಿಸಿದರು. ಫೆ.16ರಂದು ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪದಗ್ರಹಣ ನೆರವೇರಿಸಿದರು.
ಆದೇಶ ಪತ್ರ ನೀಡಿ, ಪಕ್ಷದ ಧ್ವಜ ಹಸ್ತಾಂತರ ಮಾಡಿ ಪದಗ್ರಹಣ
ನೆರವೇರಿಸಲಾಯಿತು.ನಿರ್ಗಮನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಅವರನ್ನು ಸನ್ಮಾನಿಸಲಾಯಿತು.
ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಕಾಂಗ್ರೆಸ್ ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸುಳ್ಯ ಬ್ಲಾಕ್ ಉಸ್ತುವಾರಿ ಎಂ.ಎಸ್.ಮಹಮ್ಮದ್, ದ.ಕ.ಜಿಲ್ಲಾ

ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ಸುಳ್ಯ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಸ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿರಣ್ ಬುಡ್ಲೆಗುತ್ತು, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಕಾಂಗ್ರೆಸ್ ಮುಖಂಡರಾದ

ಶುಭಾಶ್ಚಂದ್ರ ಕೋಳ್ನಾಡ್, ಜೋಕಿಂ ಡಿಸೋಜಾ, ಚಿತ್ತರಂಜನ್, ಪಿ.ಪಿ.ವರ್ಗೀಸ್, ಕೆ.ಪಿ.ಜಾನಿ, ಶಾಫಿ ಕುತ್ತಮೊಟ್ಟೆ, ಸರಸ್ವತಿ ಕಾಮತ್, ಇಸ್ಮಾಯಿಲ್ ಪಡ್ಪಿನಂಗಡಿ, ಸುರೇಶ್ ಎಂ.ಎಚ್, ಮಹೇಶ್ ಬೆಳ್ಳಾರ್ಕರ್, ಮಂಜುನಾಥ ಮಡ್ತಿಲ,
ಜಯಪ್ರಕಾಶ್ ನೆಕ್ರಪ್ಪಾಡಿ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ, ಸಂಶುದ್ದೀನ್, ಎನ್ಎಸ್ಯುಐ ಅಧ್ಯಕ್ಷ ಧನುಷ್ ಕುಕ್ಕೇಟ್ಟಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ ಸ್ವಾಗತಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ. ಕಾರ್ಯಕ್ರಮ ನಿರೂಪಿಸಿದರು.




