ಸುಳ್ಯ:ಮುಂದೆ ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ.ಯಾವುದೇ ಕ್ಷಣ ಚುನಾವಣೆ ಘೋಷಿಸಿದರೂ ಎದುರಿಸಲು ಪಕ್ಷ ಸಿದ್ದವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದೀಗ ಸುಳ್ಯ ತಾಲೂಕಿನಲ್ಲಿ
ವಾರ್ಡ್ ಸದಸ್ಯರ ಮೀಸಲಾತಿ ಪ್ರಕಟಗೊಂಡಿದೆ. ಸುಳ್ಯ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಸದಸ್ಯರ ಮೀಸಲಾತಿ ಸಂಬಂಧಿಸಿ ಕೆಲವು ಗೊಂದಲ ಉಂಟಾಗಿದೆ. ಈ ಕುರಿತು ಪಕ್ಷದ ವತಿಯಿಂದ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು. ಎಸ್ಐಆರ್ ಪ್ರಕ್ರಿಯೆಯಲ್ಲಿಯೂ ಸಾಕಷ್ಟು ಸಮಸ್ಯೆ, ಗೊಂದಲಗಳು ಉಂಟಾಗಿದೆ, ಈ ಪ್ರಕ್ರಿಯೆ ಸರಳವಾಗಿ ಆಗಬೇಕು ಎಂದರು. ಅಯೋಧ್ಯೆ ರಾಮ ಮಂದಿರ ಹಣದ ಅವ್ಯವಹಾರ, ನೀಟ್ ಪರೀಕ್ಷಾ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಬ್ದುಲ್ ಗಫೂರ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಉಪಸ್ಥಿತರಿದ್ದರು.








